ರೈತ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರೈತ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ಜುಲೈ 1, 2024

 ಕಾಲದ ಮಹಿಮೆ

                                                                image courtesy Pinterest 


 

ಬಿಸಿಲಿನ ತಾಪಕೆ ಅದರುತ ಹಾರಿ

ಕಡಲಿನ ನೀರು ನಭವನು ಸೇರಿ

ಧೂಳಿನ ಕಣಗಳು ಮೋಡದಿ ತೂರಿ

ಮಳೆಯೇ ಸುರಿದಿದೆ ನೋಡದೋ ಜಾರಿ

 

ಬತ್ತಿದ ಗದ್ದೆಗೆ ನೀರಿನ ಹರಿವು

ಭತ್ತದ ತೆನೆಗೆ ನಲಿವೋ ನಲಿವು

ಬಿತ್ತಿದ ರೈತನು ಮರೆತನು ನೋವು

ಭತ್ತದ ಹೊಟ್ಟನು ಮೆಲುಕಿದೆ ಗೋವು

 

ರೈತನ ಕಣಜ ತುಂಬಿತ್ತು

ಬಂಡಿಯು ಸಂತೆಗೆ ಬಂದಿತ್ತು

ವರುಣಗೆ ಪೂಜೆಯು ಸಂದಿತ್ತು

ನೋವಿನ ಛಾಯೆ ನಂದಿತ್ತು

 

ಬೀದಿಯ ಬದಿಯ ವ್ಯಾಪಾರಿ

ಹರಾಜು ಹಾಕಿದ ನಗೆ ಬೀರಿ

ಬಂಗಲೆ ಭೂಪ ಕೊಂಡುಂಡ

ದುಡಿದಾ ರೈತ ನಂಜುಂಡ

 

ರಚನೆ: ಡಾ. ಬೆಳವಾಡಿ ಪ್ರಭಾಕರ್


ಉಕ್ಕಿನ ಗೂಡಿನ ಮೌನ ಯೋಗಿ

  ಉಕ್ಕಿನ ಗೂಡಿನ ಮೌನ ಯೋಗಿ ನಗರವು ಮಲಗಿದೆ ಸುಖದ ಉಡಿಯಲಿ , ಹಳಿಗಳ ಮೇಲೆ ನಕ್ಷತ್ರದ ಹೊಳಪು , ಸಾವಿರ ಜೀವಗಳು ಕನಸಿನ ಕಡಲಲಿ , ಹೊದ್ದಿವೆ ಮೌನದ ಬೆಚ್ಚನೆಯ ಹೊದ...